Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:5 - ಕನ್ನಡ ಸತ್ಯವೇದವು C.L. Bible (BSI)

5 ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ, ನಿಮ್ಮ ಮಾರ್ಗಗಳನ್ನು ಜ್ಞಾಪಕ ಮಾಡುವವನನ್ನೂ ನೀವು ಸಹಾಯಮಾಡಲು ಬರುತ್ತೀರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಆದ್ದರಿಂದ ನೀವು ಬೇಸರಗೊಂಡಿರುವಿರಿ. ಹಾಗಾದರೆ, ನಮ್ಮಂಥವರಿಗೆ ರಕ್ಷಣೆ ಇದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:5
27 ತಿಳಿವುಗಳ ಹೋಲಿಕೆ  

ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


“ಯಕೋಬನ ಕುಲಪುತ್ರರೇ, ನಾನು ಅದಲುಬದಲಾಗದ ಸರ್ವೇಶ್ವರ, ಈ ಕಾರಣದಿಂದ ನೀವು ಅಳಿಯದೆ ಉಳಿದಿದ್ದೀರಿ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ಎಲೆ ಒಣಗಿದ ಮರಗಳಂತೆ ಆಗುವಿರಿ. ಜಲವಿಲ್ಲದ ವನದಂತಾಗುವಿರಿ.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ದೇವದೂತನ ಮುಂದೆ ನಿಂತಿದ್ದ ಯೆಹೋಶುವನು ಮಲಿನವಾದ ಬಟ್ಟೆಯನ್ನು ಧರಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು