ಯೆಶಾಯ 64:7 - ಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |
ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.