Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:11 - ಕನ್ನಡ ಸತ್ಯವೇದವು C.L. Bible (BSI)

11 “ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:11
24 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.


ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಆರಿಸಿಕೊಂಡಿಹನು ಪ್ರಭು ಸಿಯೋನ್ ನಗರವನು I ಅಪೇಕ್ಷಿಸಿಹನು ತನ್ನ ನಿವಾಸಕ್ಕಾಗಿ ಅದನು II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಜೆರುಸಲೇಮ್, ನಾನು ನಿನ್ನ ಮರೆತಲ್ಲಿ I ನನ್ನ ಬಲಹಸ್ತ ಬತ್ತಿಹೋಗಿಬಿಡಲಿ II


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.


ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.


‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು