ಯೆಶಾಯ 65:12 - ಕನ್ನಡ ಸತ್ಯವೇದವು C.L. Bible (BSI)12 ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.” ಅಧ್ಯಾಯವನ್ನು ನೋಡಿ |