Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:14 - ಕನ್ನಡ ಸತ್ಯವೇದವು C.L. Bible (BSI)

14 ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಆತ್ಮಕ್ಲೇಶದಿಂದ ಗೋಳಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:14
17 ತಿಳಿವುಗಳ ಹೋಲಿಕೆ  

ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಜಗವೆಲ್ಲ ಪೂಜಿಪುದು ನಿನ್ನನು I ಪೊಗಳಿ ಮಾಳ್ಪುದು ಗುಣಗಾನವನು I ಕೀರ್ತಿಸುವುದು ನಿನ್ನ ನಾಮವನು” II


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ಆರ್ಭಟಿಸುವರು ಅಳಿದುಳಿದವರು ಆನಂದದಿಂದ, ಕೊಂಡಾಡುವರು ಸರ್ವೇಶ್ವರನ ಮಹಿಮೆಯನು ಪಡುವಣದಿಂದ,


ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.


ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II


ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು