Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:16 - ಕನ್ನಡ ಸತ್ಯವೇದವು C.L. Bible (BSI)

16 ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:16
34 ತಿಳಿವುಗಳ ಹೋಲಿಕೆ  

‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.


ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಪವಿತ್ರಗ್ರಂಥದಲ್ಲಿ : ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು