Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:23 - ಕನ್ನಡ ಸತ್ಯವೇದವು C.L. Bible (BSI)

23 ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇನ್ನು ಮುಂದೆ ಜನರು ಬಿಟ್ಟೀಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:23
28 ತಿಳಿವುಗಳ ಹೋಲಿಕೆ  

ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ನೀವು ನಿಮ್ಮ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ಅವರ ಸಂತಾನ ಅವರ ಸಮ್ಮುಖದಲ್ಲಿ ಸುಸ್ಥಿರವಾಗಿದೆ ಅವರ ಕುಟುಂಬ ಅವರ ಕಣ್ಮುಂದೆಯೇ ಅಚಲವಾಗಿದೆ.


ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು