Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:24 - ಕನ್ನಡ ಸತ್ಯವೇದವು C.L. Bible (BSI)

24 ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:24
19 ತಿಳಿವುಗಳ ಹೋಲಿಕೆ  

ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: ” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು