Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:25 - ಕನ್ನಡ ಸತ್ಯವೇದವು C.L. Bible (BSI)

25 ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತೋಳವು ಕುರಿಯ ಸಂಗಡ ಮೇಯುವದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಹಾವಿಗೆ ದೂಳೇ ಆಹಾರವಾಗುವದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡುಮಾಡುವದಿಲ್ಲ, ಯಾರೂ ಹಾಳುಮಾಡುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:25
23 ತಿಳಿವುಗಳ ಹೋಲಿಕೆ  

ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.


ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.


ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ದೇವಸ್ಥಾನದ ರೂಪ, ಅದರ ವ್ಯವಸ್ಥೆ, ಗಮನಾಗಮನ ನಿಯಮಗಳು, ಸಕಲ ರಚನಾ ವಿಧಾನಗಳು, ಸಮಸ್ತ ವಿಧಿಗಳು, ಸರ್ವನಿರ್ಮಾಣ ರೀತಿಗಳು, ಎಲ್ಲ ಕಟ್ಟಳೆಗಳು ಇವೆಲ್ಲವನ್ನು ಅವರಿಗೆ ತಿಳಿಸಿ, ಅವರು ಅದರ ಪೂರ್ಣಕ್ರಮವನ್ನೂ ಎಲ್ಲ ವಿಧಿಗಳನ್ನೂ ಅನುಸರಿಸಿ ಕೈಗೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.


ಹೊಲದ ಕಲ್ಲುಬಂಡೆಗಳೊಡನೆ ಒಪ್ಪಂದಮಾಡಿಕೊಳ್ಳುವೆ ಆ ಕಾಡುಪ್ರಾಣಿಗಳೊಂದಿಗೆ ನೆಮ್ಮದಿಯಿಂದ ಬಾಳುವೆ.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು