Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:7 - ಕನ್ನಡ ಸತ್ಯವೇದವು C.L. Bible (BSI)

7 ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:7
39 ತಿಳಿವುಗಳ ಹೋಲಿಕೆ  

ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,


“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.


ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.


ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು.


ಆದರೆ ಇವನ ಕಾಲದಲ್ಲೂ ಪೂಜಾಸ್ಥಳಗಳು ಇನ್ನು ಹಾಗೆಯೇ ಇದ್ದವು. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದರು. ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.


ಇವನ ಕಾಲದಲ್ಲೂ ಪೂಜಾಸ್ಥಳಗಳು ಹಾಗೆಯೇ ಇದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.


ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ಇವನು ಇಸ್ರಯೇಲರ ಅರಸನೊಡನೆ ಸಮಾಧಾನದಿಂದಿದ್ದನು.


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು