ಯೆಶಾಯ 65:9 - ಕನ್ನಡ ಸತ್ಯವೇದವು C.L. Bible (BSI)9 ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು. ಅಧ್ಯಾಯವನ್ನು ನೋಡಿ |