Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:1
20 ತಿಳಿವುಗಳ ಹೋಲಿಕೆ  

ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಹೋಗೋಣ ಬನ್ನಿರಿ ಆತನ ಮಂದಿರಕೆ I ಅಡ್ಡಬೀಳೋಣ ಆತನ ಪಾದಪೀಠಕೆ II


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.


ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು