ಯೆಶಾಯ 66:12 - ಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ. ಅಧ್ಯಾಯವನ್ನು ನೋಡಿ |