Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:13 - ಕನ್ನಡ ಸತ್ಯವೇದವು C.L. Bible (BSI)

13 ನಾನೇ ನಿಮ್ಮನ್ನು ಸಂತೈಸುವೆನು ತಾಯಿಯಂತೆ ಸಾಂತ್ವನ ದೊರಕುವುದು ನಿಮಗೆ ಜೆರುಸಲೇಮಿನಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇವಿುನಲ್ಲೇ ನಿಮಗೆ ದುಃಖಶಮನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ನಿಮ್ಮನ್ನು ಜೆರುಸಲೇಮಿನಲ್ಲಿ ಸಂತೈಸುವೆನು. ತಾಯಿಯು ತನ್ನ ಮಗುವನ್ನು ಸಂತೈಸುವಂತೆ ನಾನು ನಿಮ್ಮನ್ನು ಸಂತೈಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ, ನಾನು ನಿಮ್ಮನ್ನು ಆದರಿಸುವೆನು. ಯೆರೂಸಲೇಮಿನ ನಿಮಿತ್ತವೇ, ಆದರಣೆ ಪಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:13
13 ತಿಳಿವುಗಳ ಹೋಲಿಕೆ  

ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ನಿಮ್ಮ ದೇವರು ಇಂತೆನ್ನುತ್ತಾರೆ : “ಸಂತೈಸಿ, ನನ್ನ ಜನರನ್ನು ಸಂತೈಸಿರಿ.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.


ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು