Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:14 - ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:14
27 ತಿಳಿವುಗಳ ಹೋಲಿಕೆ  

ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.


ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೆವು. ಆದುದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ.


ಅವನು ಬಾಬಿಲೋನಿನಿಂದ ಹೊರಟದ್ದು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ. ತನ್ನ ದೇವರ ಕೃಪಾಹಸ್ತ ಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನ ಜೆರುಸಲೇಮಿಗೆ ಬಂದು ಸೇರಿದನು.


ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.


ಆಗ ನಿನಗೆ ದೇಹಾರೋಗ್ಯ ದೊರಕುವುದು, ನಿನ್ನ ಎಲುಬುಗಳಿಗೆ ಶಕ್ತಿಸಾರತ್ವ ಸಿಗುವುದು.


ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ನಮ್ಮ ದೇವರ ಕೃಪಾಹಸ್ತ ನಮ್ಮ ಮೇಲೆ ಇದ್ದುದರಿಂದ ಅವರು ಇಸ್ರಯೇಲನ ಮಗ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನು, ಶೇರೇಬ್ಯನನ್ನು, ಅವನ ಪುತ್ರ ಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನು,


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.


ನಮ್ಮ ಹಬ್ಬ ಆಚರಣೆಗಳ ನಗರವಾದ ಸಿಯೋನನ್ನು ದೃಷ್ಟಿಸಿನೋಡಿ. ಆ ಜೆರುಸಲೇಮನ್ನು ಕಣ್ಣಿಟ್ಟು ನೋಡಿ. ಅದು ನೆಮ್ಮದಿಯ ನಿವಾಸವಾಗಿ, ಕೀಳಲಾಗದ, ಕೆಡವಲಾಗದ ದೃಢವಾದ ಗುಡಾರದಂತೆ ನಿಂತಿರುವುದನ್ನು ನೀವು ಕಣ್ಣಾರೆ ಕಾಣುವಿರಿ.


ಸರ್ವೇಶ್ವರ ಸ್ವಾಮಿ ಸಕಲ ರಾಷ್ಟ್ರಗಳ ಮೇಲೆ ಕೋಪಗೊಂಡಿದ್ದಾರೆ - ಅವುಗಳ ಸೈನ್ಯಗಳ ಮೇಲೆ ರೋಷಗೊಂಡಿದ್ದಾರೆ. ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಲು ನಿಶ್ಚಯಿಸಿದ್ದಾರೆ.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’


ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.


ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು