Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:18 - ಕನ್ನಡ ಸತ್ಯವೇದವು C.L. Bible (BSI)

18 “ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:18
44 ತಿಳಿವುಗಳ ಹೋಲಿಕೆ  

ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


“ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.


ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?


ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.


ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ನನಗೆ ಗೊತ್ತಿದೆ ನೀ ಕೂರುವುದು ಹೋಗಿಬರುವುದು, ನನಗೆ ತಿಳಿದಿದೆ ನೀ ನನ್ನ ಮೇಲೆ ರೌದ್ರಾವೇಶಗೊಂಡಿರುವುದು.


ಎದ್ದೇಳು ದೇವ, ಸ್ಥಾಪಿಸು ನ್ಯಾಯವನು ಧರೆಯೊಳು I ನಿನ್ನ ಸೊತ್ತಾಗಿವೆಯಲ್ಲವೆ ಸಮಸ್ತ ರಾಷ್ಟ್ರಗಳು II


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II


“ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.


ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು I ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು II


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


“ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.


ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಮನುಜರಾಲೋಚನೆಗಳು ತಿಳಿದೇ ಇವೆ ಪ್ರಭುವಿಗೆ I ಉಸಿರಿನಷ್ಟೇ ವ್ಯರ್ಥವೆಂದು ಗೊತ್ತಿದೆ ಆತನಿಗೆ II


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು