ಯೆಶಾಯ 66:19 - ಕನ್ನಡ ಸತ್ಯವೇದವು C.L. Bible (BSI)19 ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು. ಅಧ್ಯಾಯವನ್ನು ನೋಡಿ |