ಯೆಶಾಯ 66:2 - ಕನ್ನಡ ಸತ್ಯವೇದವು C.L. Bible (BSI)2 ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ. ಅಧ್ಯಾಯವನ್ನು ನೋಡಿ |