Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:22 - ಕನ್ನಡ ಸತ್ಯವೇದವು C.L. Bible (BSI)

22 “ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:22
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು