Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:23 - ಕನ್ನಡ ಸತ್ಯವೇದವು C.L. Bible (BSI)

23 ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:23
25 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.


ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.


ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು.


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು.


ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II


ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.


ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.


ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ಪ್ರಭುವಿಗೆ ಸೇರಿದುದು ರಾಜ್ಯಭಾರವೆಲ್ಲವು I ಆತನದೆ ರಾಷ್ಟ್ರಗಳ ಒಡೆತನವೆಲ್ಲವು II


ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.


ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು