Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:8 - ಕನ್ನಡ ಸತ್ಯವೇದವು C.L. Bible (BSI)

8 ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶವೊಂದು ಹುಟ್ಟೀತೆ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೆ? ಆದರೂ ಪ್ರಸವವೇದನೆ ತೊಡಗಿದೊಡನೆ ಸಿಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆ ತಿಂದು ತನಗಾಗಿ ಮಕ್ಕಳನ್ನು ಹಡೆದಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶ ಒಂದು ಹುಟ್ಟೀತೇ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೇ? ಆದರೂ ಪ್ರಸವವೇದನೆ ತೊಡಗಿದೊಡನೆ ಚೀಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:8
8 ತಿಳಿವುಗಳ ಹೋಲಿಕೆ  

ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು