Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:14 - ಕನ್ನಡ ಸತ್ಯವೇದವು C.L. Bible (BSI)

14 ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:14
29 ತಿಳಿವುಗಳ ಹೋಲಿಕೆ  

“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು;


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.


ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.


ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು.


ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು.


ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.


ಅದಕ್ಕೆ ಯೆಶಾಯನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ :


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


‘ನಾನು ನಿಮ್ಮನ್ನು ಈ ಸ್ಥಳದಲ್ಲೇ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು. ನನ್ನ ಮಾತು ಈಡೇರಿ ನಿಮಗೆ ಕೇಡು ಉಂಟಾಗುವುದು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು;


ಗಿದ್ಯೋನನು ದೇವರಿಗೆ, “ನೀವು ಹೇಳಿದಂತೆ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೋ ಇಲ್ಲವೋ ಎಂಬುದನ್ನು ತಿಳಿಯಪಡಿಸಿರಿ.


ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.


ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಹೀಗೆ ದಾವೀದನೇ ಆತನನ್ನು, ‘ನನ್ನ ಪ್ರಭು,’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನು ಆಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು