Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:15 - ಕನ್ನಡ ಸತ್ಯವೇದವು C.L. Bible (BSI)

15 ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನತುಪ್ಪವನ್ನೂ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನು ಒಳ್ಳೆಯದನ್ನು ಆರಿಸಿಕೊಳ್ಳಲು ಮತ್ತು ಕೆಟ್ಟದ್ದನ್ನು ನಿರಾಕರಿಸಲು ಕಲಿತುಕೊಳ್ಳುವವರೆಗೆ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:15
11 ತಿಳಿವುಗಳ ಹೋಲಿಕೆ  

ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.


ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು.


ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗು ಅಟ್ಟ ಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡಿ ಮುಗಿಸುವವರೆಗೂ ಅವನೇ ಹತ್ತಿರ ನಿಂತು ಉಪಚಾರ ಮಾಡಿದನು.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು