Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:16 - ಕನ್ನಡ ಸತ್ಯವೇದವು C.L. Bible (BSI)

16 ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:16
12 ತಿಳಿವುಗಳ ಹೋಲಿಕೆ  

ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:


ಸ್ವಾಮಿಯು ರೆಚೀನನ ಶತ್ರುಗಳನ್ನು ಅವರ ವಿರುದ್ಧವಾಗಿ ಎತ್ತಿಕಟ್ಟಿರುವರು. ಅವರ ಮುಂದೆ ಸೀರಿಯರನ್ನು, ಅವರ ಹಿಂದೆ ಫಿಲಿಷ್ಟಿಯರನ್ನು - ಹೀಗೆ ಎಲ್ಲಾ ಶತ್ರುಗಳನ್ನು ಎಬ್ಬಿಸಿರುವರು.


ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.


ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.


ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”


ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು