Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:18 - ಕನ್ನಡ ಸತ್ಯವೇದವು C.L. Bible (BSI)

18 ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಲ್ಲಿನ ನೊಣಗಳೂ ಅಶ್ಶೂರ್‍ದೇಶದ ತುಂಬಿಗಳೂ ಬರಲೆಂದು ಯೆಹೋವನು ಸಿಳ್ಳುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:18
15 ತಿಳಿವುಗಳ ಹೋಲಿಕೆ  

ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.


ಅದು ಮಾತ್ರವಲ್ಲದೆ, ನಿಮ್ಮ ದೇವರಾದ ಸರ್ವೇಶ್ವರ ಕಣಜದ ಹುಳುಗಳನ್ನು ಅವರ ನಡುವೆ ಕಳುಹಿಸುವರು; ಮರೆ ಆಗಿ ಉಳಿದುಕೊಂಡವರು ಆ ಹುಳಗಳಿಂದ ನಾಶವಾಗಿ ನಿಮಗೆ ಕಾಣದೆಹೋಗುವರು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧ ಹೊರಟು ಜೇನುನೊಣಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.


ಕವಿದಿದ್ದರು ಎನ್ನನು ಜೇನುನೊಣಗಳಂತೆ I ಪ್ರಭುವಿನ ನಾಮಬಲದಲಿ ಅವರನು ಸಂಹರಿಸಿದೆ I ಮುಳ್ಳುಗಿಡವನು ಬೆಂಕಿ ಸುಟ್ಟುಹಾಕುವಂತೆ II


ಸರ್ವೇಶ್ವರ ಹಾಗೆಯೇ ಮಾಡಿದರು. ನೊಣಗಳು ಫರೋಹನ ಅರಮನೆಯಲ್ಲೂ ಅವನ ಪರಿವಾರದವರ ಮನೆಗಳಲ್ಲೂ ಸಮಸ್ತ ಈಜಿಪ್ಟ್ ದೇಶದಲ್ಲೂ ಬಹಳವಾಗಿ ತುಂಬಿಕೊಂಡವು. ಅವುಗಳಿಂದ ದೇಶ ಹಾಳಾಯಿತು.


ಕೊಡದೆ ಹೋದರೆ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ನಿನ್ನ ಮನೆಮಾರುಗಳಿಗೂ ನೊಣಗಳ ಕಾಟವನ್ನು ಉಂಟುಮಾಡುವೆನು. ಈಜಿಪ್ಟಿನವರು ವಾಸಿಸುವ ಮನೆಗಳಲ್ಲೂ ಅವರು ಕಾಲೂರುವ ನೆಲಗಳಲ್ಲೂ ಆ ನೊಣಗಳು ತುಂಬಿಕೊಳ್ಳುವುವು.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.


ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು