Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:19 - ಕನ್ನಡ ಸತ್ಯವೇದವು C.L. Bible (BSI)

19 ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವೆಲ್ಲಾ ಬಂದು ಕಡಿದಾದ ಡೊಂಗರಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಎಲ್ಲಾ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:19
11 ತಿಳಿವುಗಳ ಹೋಲಿಕೆ  

ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ?


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.


ಸಾಗುವಳಿಯಾಗುತ್ತಿದ್ದ ಗುಡ್ಡಗಳಲ್ಲಿ ಯಾರೂ ಬರಲು ಅಂಜುವಷ್ಟು ಮುಳ್ಳುಕೊಂಪೆಗಳು ತುಂಬಿರುವುವು; ಅವು ದನಕರುಗಳು ಮೇದು ಕುರಿಮೇಕೆಗಳು ತುಳಿದಾಡುವ ಮಾಳಗಳಾಗುವುವು.”


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು