Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:20 - ಕನ್ನಡ ಸತ್ಯವೇದವು C.L. Bible (BSI)

20 ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:20
17 ತಿಳಿವುಗಳ ಹೋಲಿಕೆ  

ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.


“ನರಪುತ್ರನೇ, ಬಾಬಿಲೋನಿನ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಬಹು ಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ. ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರಿನಿಂದ ಫಲವೇನೂ ಸಿಕ್ಕಲಿಲ್ಲ.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ನೈದ್ ನದಿಯ ನೀರನ್ನು ಕುಡಿಯಲು ಈಜಿಪ್ಟಿನ ದಾರಿಯನ್ನು ಹಿಡಿದದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡಲು ಅಸ್ಸೀರಿಯ ಮಾರ್ಗದಲ್ಲಿ ಹೆಜ್ಜೆಯಿಟ್ಟಿದ್ದರಿಂದ ನಿನಗೆ ಬಂದ ಲಾಭವಾದರೂ ಏನು?


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು