Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:24 - ಕನ್ನಡ ಸತ್ಯವೇದವು C.L. Bible (BSI)

24 ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇಶವೆಲ್ಲಾ ಮುಳ್ಳುಪೊದೆಯಾಗಿರುವದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇಶವು ಕಾಡಾಗುವುದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:24
7 ತಿಳಿವುಗಳ ಹೋಲಿಕೆ  

ಆದುದರಿಂದ ನಿನ್ನ ಆಯುಧಗಳನ್ನೂ ಬಿಲ್ಲುಬತ್ತಳಿಕೆಗಳನ್ನೂ ತೆಗೆದುಕೊಂಡು ಕಾಡಿಗೆ ಹೋಗು; ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ;


ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.


ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.


ಸಾಗುವಳಿಯಾಗುತ್ತಿದ್ದ ಗುಡ್ಡಗಳಲ್ಲಿ ಯಾರೂ ಬರಲು ಅಂಜುವಷ್ಟು ಮುಳ್ಳುಕೊಂಪೆಗಳು ತುಂಬಿರುವುವು; ಅವು ದನಕರುಗಳು ಮೇದು ಕುರಿಮೇಕೆಗಳು ತುಳಿದಾಡುವ ಮಾಳಗಳಾಗುವುವು.”


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ಆಗ ಜನ ತುಂಬಿದ ಊರುಗಳು ಹಾಳಾಗಿ ನಾಡು ಪಾಳುಬೀಳುವುದು; ನಾನೇ ಸರ್ವೇಶ್ವರ ಎಂದು ನಿಮಗೆ ಆಗ ಗೊತ್ತಾಗುವುದು.”


ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು