Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:25 - ಕನ್ನಡ ಸತ್ಯವೇದವು C.L. Bible (BSI)

25 ಸಾಗುವಳಿಯಾಗುತ್ತಿದ್ದ ಗುಡ್ಡಗಳಲ್ಲಿ ಯಾರೂ ಬರಲು ಅಂಜುವಷ್ಟು ಮುಳ್ಳುಕೊಂಪೆಗಳು ತುಂಬಿರುವುವು; ಅವು ದನಕರುಗಳು ಮೇದು ಕುರಿಮೇಕೆಗಳು ತುಳಿದಾಡುವ ಮಾಳಗಳಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಗುದ್ದಲಿಯಿಂದ ಅಗತೆಮಾಡುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳುಕಂಪೆಗಳಿಗೆ ಅಂಜಿ ಬರಲಾರದೆ ಇರುವಿ; ಅದು ದನಗಳನ್ನು ಬಿಡುವದಕ್ಕೂ ಕುರಿಗಳು ತುಳಿದಾಡುವದಕ್ಕೂ ಎಡೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಒಂದು ಕಾಲದಲ್ಲಿ ಜನರು ಈ ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ ಆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಆ ಸ್ಥಳಗಳಿಗೆ ದನಕುರಿಗಳು ಮಾತ್ರವೇ ಹೋಗುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ. ಆದರೆ ಅದು ಎತ್ತುಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:25
8 ತಿಳಿವುಗಳ ಹೋಲಿಕೆ  

ಸಮುದ್ರತೀರದಲ್ಲಿರುವ ಆ ಪ್ರಾಂತ್ಯವು ಹುಲ್ಲುಗಾವಲಾಗುವುದು; ಕುರುಬರ ಗುಡಿಸಲಾಗುವುದು, ಕುರಿಗಳ ದೊಡ್ಡಿಯಾಗುವುದು.


ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು.


ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.


ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.


ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.


ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು