Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:4 - ಕನ್ನಡ ಸತ್ಯವೇದವು C.L. Bible (BSI)

4 ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:4
25 ತಿಳಿವುಗಳ ಹೋಲಿಕೆ  

ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.


ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;


ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧಮಾಡುತ್ತೇನೆ,” ಎಂದು ಹೇಳಿದನು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹ್ಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಇಪ್ಪತ್ತು ವರ್ಷ ಆಳಿದನು.


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು