ಯೆಶಾಯ 7:6 - ಕನ್ನಡ ಸತ್ಯವೇದವು C.L. Bible (BSI)6 ‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ ಒಳಗೆ ನುಗ್ಗಿಕೊಂಡು ಹೋಗಿ ಅದರಲ್ಲಿ ಟಾಬೇಲನ ಮಗನಿಗೆ ಪಟ್ಟಕಟ್ಟೋಣವೆಂದುಕೊಂಡದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |