Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:7 - ಕನ್ನಡ ಸತ್ಯವೇದವು C.L. Bible (BSI)

7 “ಆದರೆ ಸ್ವಾಮಿ ಸರ್ವೇಶ್ವರ ಆದ ನಾನು ನಿನಗೆ ಹೇಳುತ್ತೇನೆ: ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು ನೆರವೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನಾದ ಯೆಹೋವನು ಹೇಳುವದೇನಂದರೆ - ಇದು ನೆರವೇರದು, ಆಗುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ಅವರ ಕುತಂತ್ರವು ನಡೆಯದು. ಅದು ನೆರವೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಸಾರ್ವಭೌಮ ಯೆಹೋವ ದೇವರು, “ ‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:7
14 ತಿಳಿವುಗಳ ಹೋಲಿಕೆ  

ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ.


‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.


ಮೃತ್ಯುವಿನೊಂದಿಗೆ ನೀವು ಮಾಡಿಕೊಂಡ ಒಪ್ಪಂದ ಬಿದ್ದುಹೋಗುವುದು. ಆ ಮಹಾವಿಪತ್ತು ನಾಡನ್ನು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು