Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:1 - ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: “ಬರೆಯುವ ದೊಡ್ಡ ಹಲಗೆ ಒಂದನ್ನು ತೆಗೆದುಕೊಂಡು ಸಾಧಾರಣ ಲಿಪಿಯಲ್ಲಿ, ಈ ಸೂಚ್ಯವಾದ ಪದಗಳನ್ನು ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಅಂದರೆ ಸೂರೆಗೆ ಆತುರ; ಕೊಳ್ಳೆಗೆ ಅವಸರ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಯೆಹೋವನು ನನಗೆ - ದೊಡ್ಡ ಹಲಿಗೆಯನ್ನು ತೆಗೆದುಕೊಂಡು ಸಾಧಾರಣ ಲಿಪಿಯಿಂದಲೇ ವಿಷಯಸೂಚಕವಾದ ಈ ಪದವನ್ನು ಬರೆ - ಮಹೇರ್ ಶಾಲಾಲ್ ಹಾಷ್ ಬಜ್ [ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ];

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:1
11 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನನಗೆ ಇಂತೆಂದರು : “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.


ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು.


ಅನಂತರ, ಆತನು ನಗರದ ಕೋಟೆಯನ್ನು ಅಳೆದನು. ಅದು ಆತನು ಅಳೆದ ಆಳತೆಯ ಪ್ರಮಾಣದಲ್ಲಿ ಅರವತ್ತು ಮೀಟರಿನಷ್ಟು ಎತ್ತರವಾಗಿತ್ತು.


ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666.


ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲೇಖಕ ಬಾರೂಕನಿಗೆ ಕೊಟ್ಟನು. ಅವನು ಅದರಲ್ಲಿ ಜುದೇಯದ ಅರಸ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲ ಮಾತುಗಳನ್ನು ಬರೆದನು. ಅದು ಮಾತ್ರವಲ್ಲ, ಅಂಥ ಅನೇಕ ಮಾತುಗಳನ್ನೂ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಜುದೇಯದ ಅರಸ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲ ಪುನಃ ಬರೆಯಿಸು.


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.


“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ - ‘ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲ ಗ್ರಂಥರೂಪವಾಗಿ ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು