Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:10 - ಕನ್ನಡ ಸತ್ಯವೇದವು C.L. Bible (BSI)

10 ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯುದ್ಧ ಮಾಡಲು ಯೋಜನೆ ಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ ಸೈನ್ಯಕ್ಕೆ ಆಜ್ಞೆಕೊಡಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:10
40 ತಿಳಿವುಗಳ ಹೋಲಿಕೆ  

ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಈ ಸಲಹೆ ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರೆಲ್ಲರಿಗೂ ಸರಿಯಾಗಿ ಕಂಡಿತು.


ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.


ಮೃತ್ಯುವಿನೊಂದಿಗೆ ನೀವು ಮಾಡಿಕೊಂಡ ಒಪ್ಪಂದ ಬಿದ್ದುಹೋಗುವುದು. ಆ ಮಹಾವಿಪತ್ತು ನಾಡನ್ನು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


“ರಾಷ್ಟ್ರಗಳಿಗೆ ಹೀಗೆ ಪ್ರಕಟಿಸಿರಿ: ರಾಷ್ಟ್ರಗಳೇ, ಯುದ್ಧಸನ್ನದ್ಧರಾಗಿರಿ. ಶೂರರನ್ನು ಎಚ್ಚರಗೊಳಿಸಿರಿ; ಯೋಧರೆಲ್ಲರೂ ಒಟ್ಟುಗೂಡಲಿ; ಯುದ್ಧಕ್ಕೆ ಹೊರಡಲಿ.


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.


ಬಾಣ ಹೂಡಿ ಅವರ ಹಣೆಗೆ ನೀ ಬಿಡುವೆ I ಬೆನ್ನುಮಾಡಿ ಅವರೋಡುವಂತೆ ಮಾಡುವೆ II


ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II


ವ್ಯರ್ಥಗೊಳಿಸುವವರಾರು ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ಯೋಜನೆಯನು? ಹಿಂತೆಗೆವವರಾರು ಅವರೆತ್ತಿದ ಕೈಯನು?.


ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು