Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:12 - ಕನ್ನಡ ಸತ್ಯವೇದವು C.L. Bible (BSI)

12 “ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವರು ಯಾವದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ, ನೀವು ಅದನ್ನು ಒಳಸಂಚು ಎಂದು ಹೇಳಬೇಡಿರಿ. ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:12
13 ತಿಳಿವುಗಳ ಹೋಲಿಕೆ  

ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು.


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಆಗ ಯೆಹೋಶುವ ಎಲ್ಲಾ ಯೋಧರ ಮತ್ತು ಯುದ್ಧವೀರರ ಸಮೇತ ಗಿಲ್ಗಾಲಿನಿಂದ ಹೊರಟರು.


ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು