Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:15 - ಕನ್ನಡ ಸತ್ಯವೇದವು C.L. Bible (BSI)

15 ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗವಾಗುವರು, ಬೋನಿಗೆ ಸಿಕ್ಕಿ ವಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಷ್ಟೋ ಜನರು ಈ ಬಂಡೆಯಿಂದ ಎಡವಿಬೀಳುವರು. ಅವರು ಬಿದ್ದು ಮುರಿಯಲ್ಪಡುವರು; ಬಲೆಗೆ ಸಿಕ್ಕಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:15
12 ತಿಳಿವುಗಳ ಹೋಲಿಕೆ  

ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ಆದ್ದರಿಂದಲೇ ಅವರು ಎಡವುಕಲ್ಲನ್ನು ಎಡವಿಬಿದ್ದರು.


ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.


ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.


ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು