Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:19 - ಕನ್ನಡ ಸತ್ಯವೇದವು C.L. Bible (BSI)

19 ‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:19
28 ತಿಳಿವುಗಳ ಹೋಲಿಕೆ  

ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.


ಬಾಳ್‍ಪೆಗೋರ ದೇವತೆಯ ಊಳಿಗದವರಾದರು I ಸತ್ತವರಿಗರ್ಪಿಸಿದ ಬಲಿಯನು ಉಣ್ಣುವವರಾದರು II


“ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.


ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಆಗ ಸೌಲನು ಉಡಿಗೆತೊಡಿಗೆಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆಗೆ ಬಂದನು. “ದಯವಿಟ್ಟು ನನಗಾಗಿ ಭೂತಪ್ರೇತಗಳಲ್ಲಿ ವಿಚಾರಿಸಿ ಶಾಸ್ತ್ರ ಹೇಳು; ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು,” ಎಂದು ಆಕೆಯನ್ನು ಬೇಡಿಕೊಂಡನು.


ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಿಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ಆಗ ಸಮುವೇಲನು, “ಸರ್ವೇಶ್ವರ ನಿನ್ನನ್ನು ಕೈಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವುದೇಕೆ?


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಒಂದು ದಿನ ನಾವು ಪ್ರಾರ್ಥನಾ ಸ್ಥಳಕ್ಕೆ ಹೋಗುತ್ತಿದ್ದೆವು. ಗಾರುಡಗಾತಿಯಾದ ಒಬ್ಬ ದಾಸಿ ನಮ್ಮನ್ನು ಎದುರುಗೊಂಡಳು. ಆ ಹುಡುಗಿ ಕಣಿಶಕುನ ಹೇಳಿ ತನ್ನ ಯಜಮಾನನಿಗೆ ತುಂಬಾ ಹಣ ಸಂಪಾದಿಸುತ್ತಿದ್ದಳು.


ಬತ್ತಿಹೋಗಿದ್ದ ತೆನೆಗಳು ಕಾಳು ತುಂಬಿದ್ದ ಆ ಏಳು ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆ; ಅವುಗಳ ಅರ್ಥವನ್ನು ವಿವರಿಸಿ ಹೇಳಲು ಅವರಲ್ಲಿ ಯಾರಿಂದಲೂ ಆಗಲಿಲ್ಲ.”


ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.


ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು.


ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.


“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು