Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:21 - ಕನ್ನಡ ಸತ್ಯವೇದವು C.L. Bible (BSI)

21 ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:21
25 ತಿಳಿವುಗಳ ಹೋಲಿಕೆ  

ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.


ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.


ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.


ಕುಂದಿಹೋಗುವುದು ಅವನ ಕಿಮ್ಮತ್ತು ಅವನು ಬೀಳುವುದನ್ನೇ ಕಾದಿದೆ ಆಪತ್ತು.


ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ.


ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?


ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.


ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು