ಯೆಶಾಯ 8:22 - ಕನ್ನಡ ಸತ್ಯವೇದವು C.L. Bible (BSI)22 ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು. ಅಧ್ಯಾಯವನ್ನು ನೋಡಿ |
ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.