Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:4 - ಕನ್ನಡ ಸತ್ಯವೇದವು C.L. Bible (BSI)

4 ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಮಗುವು ಅಪ್ಪಾ, ಅಮ್ಮಾ, ಎಂದು ಕೂಗಬಲ್ಲದಾಗುವದರೊಳಗೆ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:4
16 ತಿಳಿವುಗಳ ಹೋಲಿಕೆ  

ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವೇಶ್ವರ ಮತ್ತೊಮ್ಮೆ ನನಗೆ ಹೀಗೆಂದರು :


ದಮಸ್ಕಸ್ ವಿಷಯವಾಗಿ ದೈವೋಕ್ತಿ : “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.


ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು