Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:9 - ಕನ್ನಡ ಸತ್ಯವೇದವು C.L. Bible (BSI)

9 ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮಸ್ತ ಜನಾಂಗಗಳೇ, ಯುದ್ಧಕ್ಕೆ ಸಿದ್ಧರಾಗಿ! ನೀವು ಸೋಲುವಿರಿ. ದೂರದೇಶದವರೇ, ಕೇಳಿರಿ, ರಣರಂಗಕ್ಕಿಳಿಯಲು ಸಿದ್ಧರಾಗಿ! ನೀವು ಸೋಲುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:9
24 ತಿಳಿವುಗಳ ಹೋಲಿಕೆ  

ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.


ನಿನ್ನ ಮೇಲೆ ಆಕ್ರಮಣಕೆ ಬರುವವನು ಪಡೆದಿಲ್ಲ ಅನುಮತಿ ನನ್ನಿಂದ ನಿನ್ನ ಮೇಲೆ ಆಕ್ರಮಣ ಮಾಡುವವನು ಪಡೆವನು ಸೋಲನು ನಿನ್ನಿಂದ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.


ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.


ಸಿದ್ಧವಾಗಿರು, ನಿನ್ನಲ್ಲಿಗೆ ಕೂಡಿಬಂದಿರುವ ಎಲ್ಲ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವುಗಳಿಗೆ ಪಾಲಕನಾಗಿರು.


ಇಸ್ರಯೇಲರೊಡನೆ ಯುದ್ಧಮಾಡಲು ಅರಸರೆಲ್ಲರು ಒಟ್ಟುಗೂಡಿ ಮೇರೋಮ್ ಜಲಾಶಯದ ಬಳಿ ಇಳಿದುಕೊಂಡರು.


“ಗುರಾಣಿ ಖೇಡ್ಯಗಳನ್ನು ಸಿದ್ಧಮಾಡಿ ಯುದ್ಧಕ್ಕೆ ಹೊರಡಿ!


ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿ. ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ತೊಟ್ಟುಕೊಳ್ಳಿರಿ!”


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು