Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:18 - ಕನ್ನಡ ಸತ್ಯವೇದವು C.L. Bible (BSI)

18 ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:18
36 ತಿಳಿವುಗಳ ಹೋಲಿಕೆ  

“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಕಾಡುಮೇಡನು ಸುಡುವಾ ಬೆಂಕಿಯಂತೆ I ಪರ್ವತವನೆ ಉರಿಸುವ ಜ್ವಾಲೆಯಂತೆ II


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.


“ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”


ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ನೀವು ಸುಟ್ಟ ಸುಣ್ಣದಂತಾಗುವಿರಿ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.


ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.


ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II


ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.


ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.


ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು