ಯೆಶಾಯ 9:20 - ಕನ್ನಡ ಸತ್ಯವೇದವು C.L. Bible (BSI)20 ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು [ತಿಂದರೂ] ಹಸಿದೇ ಇರುತ್ತಾರೆ; ಎಡಗಡೆಯಲ್ಲಿರುವದನ್ನು ಉಂಡರೂ ತೃಪ್ತಿಗೊಳ್ಳರು; ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿ |