Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:7 - ಕನ್ನಡ ಸತ್ಯವೇದವು C.L. Bible (BSI)

7 ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:7
34 ತಿಳಿವುಗಳ ಹೋಲಿಕೆ  

ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು ಶಾಶ್ವತವಾಗಿ ಉಳಿಯುವಂಥಾದ್ದು.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು