Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:1 - ಕನ್ನಡ ಸತ್ಯವೇದವು C.L. Bible (BSI)

1 ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-3 ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:1
39 ತಿಳಿವುಗಳ ಹೋಲಿಕೆ  

ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


“ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು.


ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.


ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಸ್ವರ್ಗದ ಬಾಗಿಲು ತೆರೆಯಿತು. ದೊಡ್ಡ ದುಪ್ಪಟಿಯಂತಹ ವಸ್ತುವೊಂದು ಇಳಿದು ಬರುತ್ತಿತ್ತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಭೂಮಿಯ ಮೇಲೆ ಅದನ್ನು ಇಳಿಯಬಿಡಲಾಗಿತ್ತು.


ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.


ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.


ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.


ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದ‍ನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.


ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


ನೀರಿನಿಂದ ಅವರು ಮೇಲಕ್ಕೆ ಬರುತ್ತಿರುವಾಗಲೇ ಆಕಾಶವು ತೆರೆದು, ಪವಿತ್ರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿಯುತ್ತಿರುವುದನ್ನು ಕಂಡರು.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, "ಇಗೋ, ಸಿದ್ಧನಿದ್ದೇನೆ,” ಎಂದನು.


ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.


ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಯೇಸುಸ್ವಾಮಿ ಬೋಧಿಸಲು ಪ್ರಾರಂಭಿಸಿದಾಗ ಅವರಿಗೆ ಸುಮಾರು ಮೂವತ್ತು ವರ್ಷ ವಯಸ್ಸು. ಯೇಸು ಜೋಸೆಫನ ಮಗನೆಂದು ಜನರು ಭಾವಿಸಿದ್ದರು. ಜೋಸೆಫನು ಹೇಲಿಯನಿಗೆ ಹುಟ್ಟಿದನು.


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II


“ನೀವೋ, ‘ಸರ್ವೇಶ್ವರ ನಮಗಾಗಿ ಬಾಬಿಲೋನಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾರೆ’ ಎಂದುಕೊಂಡಿದ್ದೀರಿ.


ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಅವುಗಳ ರೂಪ ಹೇಗಿತ್ತೆಂದರೆ ಒಂದು‍ ಚಕ್ರದೊಳಗೆ ಇನ್ನೊಂದು ಚಕ್ರ ರಚಿಸಿದಂತಿತ್ತು. ಆ ನಾಲ್ಕು ಚಕ್ರಗಳೂ ಒಂದೇ ಮಾದರಿಯಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು