Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:11 - ಕನ್ನಡ ಸತ್ಯವೇದವು C.L. Bible (BSI)

11 ಅವುಗಳ ರೆಕ್ಕೆಗಳು ಮೇಲಕ್ಕೆ ಹರಡಿಕೊಂಡಿದ್ದವು. ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕಗಳಿಗೆ ತಗುಲುತ್ತಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವುಗಳ ಮುಖಗಳೂ ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹಕ್ಕೆ ಮರೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವುಗಳ ಮುಖಗಳು ಹೀಗಿದ್ದವು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಿಕೊಂಡಿದ್ದವು. ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು, ಒಂದಕ್ಕೊಂದು ಅಂಟಿಕೊಂಡಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:11
4 ತಿಳಿವುಗಳ ಹೋಲಿಕೆ  

ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.


ಅದರ ಕೆಳಗೆ ಆ ಜೀವಿಗಳ ರೆಕ್ಕೆಗಳು ಮಟ್ಟಸವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.


ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು.


ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು