Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:16 - ಕನ್ನಡ ಸತ್ಯವೇದವು C.L. Bible (BSI)

16 ಆ ಚಕ್ರಗಳ ವರ್ಣರಚನೆ ಹೇಗಿತ್ತೆಂದರೆ: ಅವುಗಳ ವರ್ಣ ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಚಕ್ರಗಳ ವರ್ಣವೂ ರಚನೆಯೂ ಹೇಗಿದ್ದವಂದರೆ - ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು [ಅಡ್ಡವಾಗಿ] ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:16
11 ತಿಳಿವುಗಳ ಹೋಲಿಕೆ  

ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಢೂರ್ಯಗಳೂ ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.


ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.


ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ, ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು