Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:22 - ಕನ್ನಡ ಸತ್ಯವೇದವು C.L. Bible (BSI)

22 ಮಂಜುಗಡ್ಡೆಯಂತೆ ಥಳಥಳಿಸುವ ಒಂದು ತೆರೆದ ಆಶ್ಚರ್ಯಕರವಾದ ಗವಿಯಾಕೃತಿ ಆ ಜೀವಿಗಳ ತಲೆಯ ಮೇಲ್ಗಡೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಭೀಕರವಾದ ಮಂಜುಗಡ್ಡೆಯಂತೆ ಥಳಿಥಳಿಸುವ ಒಂದು ತರದ ನೆಲಗಟ್ಟು ಆ ಜೀವಿಗಳ ತಲೆಯ ಮೇಲ್ಗಡೆ ಹಾಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಬೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸ್ವಚ್ಫವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಜೀವಿಯ ತಲೆಗಳ ಮೇಲೆ ಗಗನ ಮಂಡಲ ವಿಶಾಲ ರೂಪವು ವಜ್ರದಂತಿತ್ತು. ಮತ್ತು ಅದು ಅದ್ಭುತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:22
9 ತಿಳಿವುಗಳ ಹೋಲಿಕೆ  

ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.


ಉತ್ತರದಿಂದ ಹೊನ್ನಿನ ಹೊಳಪು ಹೊರಡುವುದು ದೇವರು ವಿಸ್ಮಯಕರ ತೇಜಸ್ಸನು ಧರಿಸಿರುವನು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲಿಂದ ಒಂದು ಧ್ವನಿ ನನ್ನ ಕಿವಿಗೆ ಬಿತ್ತು.


ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು