Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:26 - ಕನ್ನಡ ಸತ್ಯವೇದವು C.L. Bible (BSI)

26 ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲೆ ಇಂದ್ರ ನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಬಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:26
34 ತಿಳಿವುಗಳ ಹೋಲಿಕೆ  

ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.


ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.


ಮಂಜುಗಡ್ಡೆಯಂತೆ ಥಳಥಳಿಸುವ ಒಂದು ತೆರೆದ ಆಶ್ಚರ್ಯಕರವಾದ ಗವಿಯಾಕೃತಿ ಆ ಜೀವಿಗಳ ತಲೆಯ ಮೇಲ್ಗಡೆ ಇತ್ತು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಅದರ ಮಧ್ಯೆದಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು. ಅವುಗಳ ರೂಪ ಮನುಷ್ಯರೂಪದಂತಿತ್ತು.


ದೇವಸ್ಥಾನದೊಳಗಿಂದ ನನ್ನನ್ನು ಸಂಬೋಧಿಸಿ ನುಡಿಯುವವನ ಶಬ್ದ ನನ್ನ ಕಿವಿಗೆ ಬಿದ್ದಿತು; ಆ ಪುರುಷ ನನ್ನ ಪಕ್ಕದಲ್ಲೇ ನಿಂತಿದ್ದನು.


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ನನಗೆ ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತ ಕಾಂತಿಯೊಂದು ಹೊಳೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು