ಯೆಹೆಜ್ಕೇಲನು 1:3 - ಕನ್ನಡ ಸತ್ಯವೇದವು C.L. Bible (BSI)3 ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ ಯಾಜಕನೂ ಆದ ಯೆಹೆಜ್ಕೇಲನಿಗೆ ಸಾಕ್ಷಾತ್ತಾಗಿ ಒದಗಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು. ಅಧ್ಯಾಯವನ್ನು ನೋಡಿ |